LATEST NEWS
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
ಹೊಸದಿಲ್ಲಿ ಡಿಸೆಂಬರ್ 26: ದೇಶದ ಖ್ಯಾತ ಆರ್ಥಿಕ ತಜ್ಞ ಎರಡು ಬಾರಿ ದೇಶದ ಪ್ರಧಾನಿಯಾಗಿ ದೇಶ ಮುನ್ನೆಡೆಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
2004 ರಿಂದ 2014ರವರೆಗಿನ ಯುಪಿಎ ಮೊದಲ ಹಾಗೂ ಎರಡನೇ ಅವಧಿಯಲ್ಲಿ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಡಾ.ಮನಮೋಹನ್ ಸಿಂಗ್ 1991ರಿಂದ ರಾಜ್ಯಸಭಾ ಸದಸ್ಯರಾಗಿ ಕಳೆದ ವರ್ಷವಷ್ಟೇ ನಿವೃತ್ತಿಯಾಗಿದ್ದರು. ಪಿ.ವಿ.ನರಸಿಂಹ ರಾವ್ ಪ್ರಧಾನಿಯಾಗಿದ್ದಾಗ 1991ರಲ್ಲಿ ರಾಜ್ಯಸಭಾ ಸದಸ್ಯರಾಗಿ ಹಣಕಾಸು ಸಚಿವರಾಗಿ ರಾಜಕೀಯ ಇನ್ನಿಂಗ್ಸ್ ಆರಂಭಿಸಿದರು. ಮೇಲ್ಮನೆಯಲ್ಲಿ ಐದು ಬಾರಿ ಅಸ್ಸಾಂ ಅನ್ನು ಪ್ರತಿನಿಧಿಸಿದರು.