LATEST NEWS
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಸೊಂಕು

ನವದೆಹಲಿ ಅಗಸ್ಟ್ 10: ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಮಾಹಿತಿಯನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿಯನ್ನು ತಿಳಿಸಿದ್ದಾರೆ.
‘ನಿಯಮಿತ ಆರೋಗ್ಯ ತಪಾಸಣೆಗೆ ಹೋದ ಸಂದರ್ಭದಲ್ಲಿ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಆಗಿದೆ. ಕಳೆದ ವಾರದಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕ್ವಾರಂಟೈನ್‌ಗೆ ಒಳಗಾಗಿ, ಹಾಗೆಯೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಹೇಳಿದ್ದಾರೆ.
ಈಗ ಕೊರೊನಾ ಜನಸಾಮಾನ್ಯರ ನಂತರ ರಾಜಕೀಯ ನೇತಾರರ ಬೆನ್ನು ಬಿದ್ದಿದೆ.
