LATEST NEWS
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ಕೊರೊನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಅವರು ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದಿಲ್ಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯಲ್ಲಿ ಸೇನೆಯ ರಿಸರ್ಚ್ ಆ್ಯಂಡ್ ರೆಫೆರಲ್ ಆಸ್ಪತ್ರೆಯಲ್ಲಿ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಸಹಕಾರ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತ ತೆಗೆಯಲು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆಗೂ ಮುನ್ನ ನಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಬಗ್ಗೆ ಪ್ರಣಬ್ ಮುಖರ್ಜಿ ಅವರೇ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದರು.