LATEST NEWS
ಪೆಟ್ರೋಲ್ ಮತ್ತು ಡೀಸೆಲ್ ದರ 2.50 ರೂಪಾಯಿ ಇಳಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರ 2.50 ರೂಪಾಯಿ ಇಳಿಕೆ
ನವದೆಹಲಿ ಅಕ್ಟೋಬರ್ 4: ದಿನದಿಂದ ದಿನಕ್ಕೆ ಗಗನ್ನಕ್ಕೇರುತ್ತಿದ್ದ ತೈಲ ಬೆಲೆಯ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿ ಆದೇಶಿಸಿದೆ. ಅಬಕಾರಿ ಸುಂಕ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ 2.50 ರೂಪಾಯಿಯಷ್ಟು ಇಳಿಕೆಯಾಗಲಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ತೈಲ 76 ಡಾಲರ್ ನಲ್ಲಿ ಮಾರಾಟವಾಗುತ್ತಿದೆ. ಅಲ್ಲದೆ ಡಾಲರ್ ಎದುರು ರೂಪಾಯಿ ಮೌಲ್ಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವುದು ದೇಶದಲ್ಲಿ ತೈಲ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿತ್ತು. ಅಲ್ಲದೆ ವಿಶ್ವದ ದೊಡ್ಡಣ ಅಮೇರಿಕಾದ ವಾಣಿಜ್ಯ ಸಮರ ಕೂಡ ತೈಲ ಬೆಲೆ ಏರಿಕೆಯಾಗಲು ಪ್ರಮುಖ ಕಾರಣವಾಗಿತ್ತು.

2014 ರಿಂದ 2016 ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ. ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು.
ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ. ನಿಂದ 21.48 ರೂ., ಡೀಸೆಲ್ ಮೇಲೆ 3.56 ರೂ.ನಿಂದ 17.33 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿತ್ತು. 2016 ರ ವರೆಗೆ ಈ ಏರಿಕೆ ಮಾಡಿದ್ದು, 2017 ರ ಅಕ್ಟೋಬರ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು.
ಈ ಮತ್ತೆ 2.50ರೂಪಾಯಿ ಯನ್ನು ಕಡಿತಗೊಳಿಸುವ ಮೂಲಕ ಪೆಟ್ರೋಲ್ ಮತ್ತು ಡಿಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಲಿದೆ.