Connect with us

    LATEST NEWS

    ಸಸ್ಪೆಂಡ್ ಮಾಡಿದ್ದಕ್ಕೆ ಎಕ್ಸ್ ಪರ್ಟ್ ಕಾಲೇಜಿನ ವಿಧ್ಯಾರ್ಥಿ ಆತ್ಮಹತ್ಯೆ

    ಸಸ್ಪೆಂಡ್ ಮಾಡಿದ್ದಕ್ಕೆ ಎಕ್ಸ್ ಪರ್ಟ್ ಕಾಲೇಜಿನ ವಿಧ್ಯಾರ್ಥಿ ಆತ್ಮಹತ್ಯೆ

    ಮಂಗಳೂರು ಸೆಪ್ಟೆಂಬರ್ 26: ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉರ್ವಾದಲ್ಲಿ ನಡೆದಿದೆ.

    ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಕಲಿಯುತ್ತಿರುವ ಗೋವಾ ಮೂಲದ ನೆವಿಲ್ ಫೆರ್ನಾಂಡಿಸ್ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಎಂದು ಗುರುತಿಸಲಾಗಿದೆ.

    ನೆವಿಲ್ ಫೆರ್ನಾಂಡಿಸ್ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ವಿದ್ಯಾರ್ಥಿಯನ್ನು ಕಾಲೇಜಿನಿಂದ ಆಡಳಿತ ಮಂಡಳಿ ಸಸ್ಪೆಂಡ್ ಮಾಡಿತ್ತು ಎಂದು ಹೇಳಲಾಗಿದೆ.

    ಈ ಘಟನೆಯಿಂದ ಮನನೊಂದು ನೆವಿಲ್ ಫೆರ್ನಾಂಡಿಸ್ ಮಂಗಳೂರಿನ ಉರ್ವದಲ್ಲಿರುವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply