ದೆಹಲಿ ನವೆಂಬರ್ 10: ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಪೋಟದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು 24 ಜನರು ಗಾಯಗೊಂಡಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಬೆಳಿಗ್ಗೆ 6.52 ಕ್ಕೆ ಹುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಜನನಿಬಿಡ ಪ್ರದೇಶದಲ್ಲಿ ಛಿದ್ರಗೊಂಡ ದೇಹಗಳು ಮತ್ತು ಛಿದ್ರಗೊಂಡ ಕಾರುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಕೆಂಪು ಕೋಟೆ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಕರಿದ್ದರು. ಸ್ಫೋಟದಿಂದ ಹತ್ತಿರದ ಕಾರುಗಳು ಹಾನಿಗೊಳಗಾದವು” ಎಂದು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಸುದ್ದಿಗಾರರಿಗೆ ತಿಳಿಸಿದರು. ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಘಟನಾ ಸ್ಥಳಕ್ಕೆ ಇಪ್ಪತ್ತು ಅಗ್ನಿಶಾಮಕ ವಾಹನಗಳನ್ನು ರವಾನಿಸಲಾಗಿದ್ದು, ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದಾರೆ. ಭಯೋತ್ಪಾದನಾ ನಿಗ್ರಹ ದಳ ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕವು ಸ್ಥಳದಲ್ಲಿ ಬೀಡು ಬಿಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಘಟನೆ ವಿಡಿಯೋಗಳು ವೈರಲ್ ಆಗಿದೆ.


ಹರಿಯಾಣದ ಫರಿದಾಬಾದ್‌ನಲ್ಲಿರುವ ಎರಡು ವಸತಿ ಕಟ್ಟಡಗಳಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸುಮಾರು 3,000 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಸ್ಫೋಟ ಸಂಭವಿಸಿದೆ.

Share Information