LATEST NEWS
ಕಾಲೇಜಿನ ಕ್ಯಾಂಟಿನ್ ಮೇಲೆ ಬಿದ್ದ ಬಾಂಗ್ಲಾದೇಶ ವಾಯುಪಡೆಯ ತರಬೇತಿ ಜೆಟ್ ವಿಮಾನ – 19ಕ್ಕೂ ಅಧಿಕ ಮಂದಿ ಸಾವು

ಢಾಕಾ ಜುಲೈ 21: ಬಾಂಗ್ಲಾದೇಶ ವಾಯುಪಡೆಯ ತರಬೇತಿ ಜೆಟ್ ವಿಮಾನವೊಂದು ಕಾಲೇಜಿನ ಕ್ಯಾಂಟಿನ್ ಮೇಲೆ ಬಿದ್ದ ಪರಿಣಾಮ 19ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ., ಚೀನಾ ನಿರ್ಮಿತ F-7 BGI ವಿಮಾನ ಅಪಘಾತಕ್ಕೀಡಾಗಿದ್ದು, ಇಂದು ಮಧ್ಯಾಹ್ನ 1:06ಕ್ಕೆ ವಿಮಾನ ಟೇಕ್ ಆಫ್ ಆಗಿದ್ದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ವಿಮಾನವು ಮೈಲ್‌ಸ್ಟೋನ್ ಕಾಲೇಜಿನ ಕ್ಯಾಂಟೀನ್‌ನ ಛಾವಣಿಯ ಮೇಲೆ ಬಿದ್ದಿದೆ. ವಿಮಾನವು ಇದ್ದಕ್ಕಿದ್ದಂತೆ ದೊಡ್ಡ ಶಬ್ದದೊಂದಿಗೆ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕ್ಯಾಂಪಸ್‌ನಲ್ಲಿರುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭಯಭೀತರಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಕಟ್ಟಡವನ್ನು ಪ್ಲೇಗ್ರೂಪ್ ತರಗತಿಗಳಿಗೆ ಬಳಸಲಾಗುತ್ತಿತ್ತು. ವಿಮಾನ ಪತನದಲ್ಲಿ 19 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಹಲವರ ಪರಿಸ್ಥಿತಿ ಗಂಭೀರವಾಗಿದ್ದು ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
