Connect with us

BELTHANGADI

ಬೆಳ್ತಂಗಡಿ – ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಬೆಳ್ತಂಗಡಿ ಜುಲೈ 13: ಸೌಜನ್ಯ ಹೋರಾಟಗಾರರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.


ಮೊದಲೇ ಪ್ರಕರಣದಲ್ಲಿ ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46) ಎಂಬವರು ನೀಡಿದ ದೂರಿನಂತೆ ದಿನಾಂಕ:11-07-2025 ರಂದು ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಇನ್ನೊಂದು ಪ್ರಕರಣದಲ್ಲಿ ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ (28) ಎಂಬವರ ದೂರಿನಂತೆ ದಿನಾಂಕ: 11-07-2025 ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 59/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *