DAKSHINA KANNADA
ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿಯೇ ನಕಲಿ ಖಾತೆ..!?
ಮಂಗಳೂರು, ಎಪ್ರಿಲ್ 26 : ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು, ಅದರಿಂದ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರುವಂತೆ ಸ್ವತಃ ಪೊಲೀಸ್ ಆಯುಕ್ತ ಶಶಿಕುಮಾರ್ ರವರು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ನಾವು ನಮ್ಮ ಅಧಿಕೃತ ಫೇಸ್ಬುಕ್ ಖಾತೆಗೆ ಅಪ್ಲೋಡ್ ಮಾಡಿರುವ ಫೋಟೋ ಮತ್ತು ವಿವರಗಳನ್ನು ಬಳಸಿಕೊಂಡು ನಕಲಿ ಖಾತೆ ತೆರೆಯಲಾಗಿದೆ. ಅದರಿಂದ ಹಲವು ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕೂಡ ಹೋಗಿದೆ. ಆದ್ದರಿಂದ ಎಲ್ಲರೂ ಈ ಬಗ್ಗೆ ಎಚ್ಚರದಿಂದ ಇರುವಂತೆ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ನಕಲಿ ಖಾತೆ ಮೂಲಕ ಹಣ ಕಳಿಸಲು ಹೇಳಬಹುದು, ಈ ಬಗ್ಗೆ ಎಲ್ಲರೂ ಜಾಗರೂಕರಾಗಿರಿ ಎಂದು ಸೂಚಿಸಿದ್ದಾರೆ. ಪೊಲೀಸ್ ಆಯುಕ್ತರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.