Connect with us

    DAKSHINA KANNADA

    ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿಯೇ ನಕಲಿ ಖಾತೆ..!?

    ಮಂಗಳೂರು, ಎಪ್ರಿಲ್ 26 : ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು, ಅದರಿಂದ ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರುವಂತೆ ಸ್ವತಃ ಪೊಲೀಸ್ ಆಯುಕ್ತ ಶಶಿಕುಮಾರ್ ರವರು ತಮ್ಮ ಅಧಿಕೃತ ಫೇಸ್​ಬುಕ್ ಖಾತೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ನಾವು ನಮ್ಮ ಅಧಿಕೃತ ಫೇಸ್​ಬುಕ್​ ಖಾತೆಗೆ ಅಪ್ಲೋಡ್ ಮಾಡಿರುವ ಫೋಟೋ ಮತ್ತು ವಿವರಗಳನ್ನು ಬಳಸಿಕೊಂಡು ನಕಲಿ ಖಾತೆ ತೆರೆಯಲಾಗಿದೆ. ಅದರಿಂದ ಹಲವು ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕೂಡ ಹೋಗಿದೆ. ಆದ್ದರಿಂದ ಎಲ್ಲರೂ ಈ ಬಗ್ಗೆ ಎಚ್ಚರದಿಂದ ಇರುವಂತೆ ಪೊಲೀಸ್​ ಆಯುಕ್ತರು ಹೇಳಿದ್ದಾರೆ.

    ನಕಲಿ ಖಾತೆ ಮೂಲಕ ಹಣ ಕಳಿಸಲು ಹೇಳಬಹುದು, ಈ ಬಗ್ಗೆ ಎಲ್ಲರೂ ಜಾಗರೂಕರಾಗಿರಿ ಎಂದು ಸೂಚಿಸಿದ್ದಾರೆ. ಪೊಲೀಸ್ ಆಯುಕ್ತರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply