Connect with us

LATEST NEWS

ಮಂಗಳೂರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ

ಮಂಗಳೂರು ಅಗಸ್ಟ್ 19: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಇಂದು ನಡೆದಿದೆ.


ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನದ ಸುಮಾರಿಗೆ ಅನಾಮಿಕ ವ್ಯಕ್ತಿಯೊಬ್ಬ ಏರ್ ಪೋರ್ಟ್ ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ , ಈ ಹಿನ್ನಲೆ ಸಿಐಎಸ್ ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸಂಪೂರ್ಣ ಏರ್ ಪೋರ್ಟ್ ನ್ನು ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ನಂತರ ಯಾರೋ ಕಿಡಿಗೇಡಿಗಳ ಹುಸಿಬಾಂಬ್ ಕರೆ ಇದಾಗಿದ್ದು ಎಂದು ತಿಳಿದು ಬಂದಿದೆ. ಈ ಘಟನೆ ಕುರಿತಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಜನವರಿಯಲ್ಲಿ ಆದಿತ್ಯರಾವ್ ಎಂಬಾತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟಿದ್ದು, ಇಡೀ ದೇಶದ ಗಮನ ಸೆಳೆದಿತ್ತು. ತಪಾಸಣೆ ವೇಳೆ ಪತ್ತೆಯಾದ ಈ ಬಾಂಬ್ ನ್ನು ನಿಷ್ಕ್ರೀಯಗೊಳಿಸಲಾಗಿತ್ತು.

Facebook Comments

comments