LATEST NEWS
ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ಹಣಕ್ಕಾಗಿ ಮೆಸೇಜ್
ಮಂಗಳೂರು ಅಕ್ಟೋಬರ್ 26: ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದ್ದು, ಈ ಕುರಿತಂತೆ ಮಂಗಳೂರು ಸೆನ್ ಠಾಣೆಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಖಾತೆ ಕ್ರಿಯೆಟ್ ಮಾಡಿದ್ದಾರೆ. ಬಳಿಕ ಕೆಲವರಿಗೆ ಪ್ರೆಂಡ್ ರಿಕ್ವೆಸ್ಟ್ ಕಳಿಸಿ ಬಳಿಕ ಮೆಸೆಂಜರ್ ಮೂಲಕ ಹಣ ಕೇಳಿದ್ದಾರೆ.
ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ “ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.