Connect with us

    LATEST NEWS

    ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ಪ್ರೆಂಡ್ ರಿಕ್ವೆಸ್ಟ್ ಜೊತೆ ಹಣಕ್ಕೆ ರಿಕ್ವೆಸ್ಟ್

    ಉಡುಪಿ ನವೆಂಬರ್ 21: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಕಿಡಿಗೇಡಿಗಳು ಹಲವರಿಗೆ ಫ್ರೆಂಡ್ ರಿಕ್ವೇಸ್ಟ್ ಕಳಹಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನಡೆದಿದ್ದು, ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


    ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ , ಪೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್‌ ಖಾತೆ ಸೃಜಿಸಿ Friend request ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಠಾಣಾಧಿಕಾರಿ ಸೆನ್‌ ಪೊಲೀಸ್‌ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಕೋರಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *