Connect with us

    LATEST NEWS

    ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಕಲಿ ಹೆಸರು

    ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ನಕಲಿ ಹೆಸರು

    ಮಂಗಳೂರು ಜುಲೈ 3: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಕೋಟಿ ಚೆನ್ನಯ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಫಲಕ ಆಳವಡಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ.

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಹೆಸರುಗಳು ಇಡಬೇಕೆಂಬ ಬೇಡಿಕೆ ಬಹಳ ವರ್ಷದಿಂದ ಕೇಳಿ ಬರುತ್ತಿದೆ. ಇದರ ನಡುವೆ ಇತ್ತೀಚೆಗೆ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ ಹೆಸರನ್ನು ಇಡಬೇಕೆಂಬ ಕೂಗೂ ಕೇಳಿ ಬಂದಿತ್ತು. ಈಗ ಯಾವುದೋ ಕಿಡಿಗೇಡಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಾಮಫಲಕವನ್ನು ಪೋಟೋಶಾಪ್ ಮಾಡಿ ಕೋಟಿ ಚೆನ್ನಯ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಇದರಿಂದಾಗಿ ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟು ಮಾಡಿತ್ತು.

    ಇದೀಗ ಈ ಸುದ್ದಿ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೂ ಬಂದಿದ್ದು, ಈ ಕೀಳುಮಟ್ಟದ ಪ್ರಚಾರಕ್ಕೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *