LATEST NEWS
ಕಾರ್ಕಳ ನಕಲಿ ಪರುಶುರಾಮ ಮೂರ್ತಿ ವಿವಾದ – ಉಡುಪಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅಮಾನತು
ಉಡುಪಿ ಜುಲೈ 25: ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ನಕಲಿ ಪರುಶುರಾಮ ಮೂರ್ತಿ ವಿವಾದಕ್ಕೆ ಇದೀಗ ಮೊದಲ ತಲೆದಂಡವಾಗಿದೆ. ಉಡುಪಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವ ಹಾಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕನಸಿನ ಪರುಶುರಾಮ್ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಕಂಚಿನ ಪರುಶುರಾಮ ಮೂರ್ತಿ ನಕಲಿ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಸರಕಾರ ಈ ಪ್ರಕರಣದ ತಿನಿಖೆಗೆ ನ್ಯಾ.ನಾಗಮೋಹನ್ ದಾಸ್ ವಿಚಾರಣಾ ಆಯೋಗವನ್ನು ನೇಮಿಸಿದ್ದು. ತನಿಖೆ ಮುಂದುವರೆದಿದೆ.
ಈ ನಡುವೆ ನಕಲಿ ಪರುಶುರಾಮ ಮೂರ್ತಿ ಸಂಬಂಧ ಮೊದಲ ತಲೆದಂಡವಾಗಿದ್ದು, ಪರುಶುರಾಮ ಥೀಮ್ ಪಾರ್ಕ್ ನಿರ್ಮಾಣದ ಉಸ್ತುವಾರಿ ಹೊತ್ತಿದ್ದ ಉಡುಪಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಕಾಮಗಾರಿಯನ್ನು ಪೂರ್ಣಗೊಳಿಸದೆ ಇರುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ಧಾರ್ಮಿಕ ಭಾವನೆಗೆ ಅಪಚಾರವಾಗುತ್ತಿರುವ ಬಗ್ಗೆ ಚರ್ಚೆಗಳಿಗೆ ಕಾರಣವಾದ ಯೋಜನೆ ಇದಾಗಿದ್ದು, ಈ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವಿಚಾರಣಾ ಆಯೋಗದ ತನಿಖಾ ಹಂತದಲ್ಲಿದೆ. ಅಲ್ಲದೆ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ಸಿಒಡಿ ತನಿಖೆ ನಡೆಯುತ್ತಿದೆ. ತನಿಖೆಗೆ ಆಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದ್ದು, ಈ ಪೈಕಿ ರೂ.672.00ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ. ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ, ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರ/ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ವಿವಿಧ ಪತ್ರಿಕೆ /ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸದ್ರಿ ಕಾಮಗಾರಿಯ ಬಗ್ಗೆ
ಪೊಲೀಸ್ ಇಲಾಖೆ ಮತ್ತು ಗೌರವಾನ್ವಿತ ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದ್ದು ಹಾಗೂ ಮಾನ್ಯ ಉಚ್ಚನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಸದ್ದಿ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಾಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ಶ್ರೀ ಅರುಣ್ ಕುಮಾರ್. ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಈ ಕೆಳಗೆ ಕಾಣಿಸಿದಂತೆ ಆದೇಶ ಹೊರಡಿಸಿದೆ.
ಮೇಲೆ ವಿವರಿಸಿದಂತೆ, ಶ್ರೀ ಅರುಣ್ ಕುಮಾರ್. ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು, ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಪೂರ್ಣಗೊಳಿಸದೇ ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ, ಸದ್ರಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಆರೋಪಗಳಿರುವುದರಿಂದ ಮತ್ತು ಈ ವಿಚಾರದ ಬಗ್ಗೆ. ಸಿ.ಒ.ಡಿ ತನಿಖೆ ಹಾಗೂ ಗೌರವಾನ್ವಿತ ನಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿ ಇದ್ದು ಸದ್ರಿ ತನಿಖೆಗೆ ಅಡಚಣೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಶ್ರೀ ಅರುಣ್ ಕುಮಾರ್, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶಿಸಿದೆ, ಇವರ ಸ್ನಾನಕ್ಕೆ ಶ್ರೀ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ನೀಡಿ ಆದೇಶಿಸಿದೆ.