Connect with us

    LATEST NEWS

    ಮಂಗಳೂರಿನಲ್ಲಿ ನಕಲಿ ಪೊಲೀಸ್ ಹಾವಳಿ – ನಕಲಿ ಪಿಎಸ್ಐ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್….!!

    ಮಂಗಳೂರು ಆಗಸ್ಟ್ 20: ನರ್ಸಿಂಗ್ ವಿಧ್ಯಾರ್ಥಿಯೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


    ಬಂಧಿತನನ್ನು ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂದು ಗುರುತಿಸಲಾಗಿದೆ. ಈತ ನಗರದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಯಾಗಿದ್ದಾನೆ. ಆರೋಪಿ ಬಳಿಯಿಂದ RAW, ಕೇರಳ ಸ್ಟೇಟ್ ಪೊಲೀಸ್ ಮತ್ತು ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಅಂಡ್ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟ್ಮೆಂಟ್ ಕೇರಳ ಹೆಸರಿನಲ್ಲಿ ನಕಲಿ ಐಡಿಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ಪಿಎಸ್ಐ ಸಮವಸ್ತ್ರ, ಪೊಲೀಸ್ ಲೋಗೊ, ಮೆಡಲ್, ಬೆಲ್ಟ್, ಕ್ಯಾಪ್, ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಸೆಟ್ ಗಳನ್ನು ವಶಪಡಿಸಲಾಗಿದೆ.

    ಈತನಿಂದ ವಂಚನೆಗೆ ಒಳಗಾದವರಿದ್ದರೆ, ಉರ್ವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply