DAKSHINA KANNADA
ಸಾಮಾಜಿಕ ಜಾಲತಾಣದಲ್ಲಿ ಯುವತಿಯ ನಕಲಿ ಖಾತೆ ಸೃಷ್ಠಿ – ಕಡಬದ ಯುವಕನ ವಶಕ್ಕೆ ಪಡೆದ ಪಶ್ಚಿಮ ಬಂಗಾಲ ಪೋಲೀಸರು

ಪುತ್ತೂರು ಸೆಪ್ಟೆಂಬರ್ 04: ಕೋಲ್ಕತಾದ ಯುವತಿಯೋರ್ವಳ ಸಾಮಾಜಿಕ ಜಾಲತಾಣದ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ರಾಜಕೀಯ ಪಕ್ಷವೊಂದರ ಮುಖಂಡರ ಮಗನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಬಳ್ಳೇರಿ ನಿವಾಸಿ ಸಂಜಯ ಕೃಷ್ಣ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಕಾಲೇಜೊಂದರಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯ ಖಾತೆಯನ್ನು ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ಸೈಬರ್ ಕ್ರೈಂ ನಡಿಯಲ್ಲಿ ದೂರು ದಾಖಲಿಸಿದ್ದರು.
ಬಳಿಕ ಪ್ರಕರಣದ ಜಾಡು ಹಿಡಿದು ಎರಡು ದಿನಗಳ ಹಿಂದೆ ಕಡಬಕ್ಕೆ ಆಗಮಿಸಿದ ಕೋಲ್ಕತಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.