Connect with us

    LATEST NEWS

    ಅಶ್ಲೀಲ ಪೋಟೋ ಬಳಸಿ ಬ್ಲ್ಯಾಕ್ ಮೇಲ್ ಇಳಿದ ಹುಡುಗರು ಅಂದರ್

    ಮಂಗಳೂರು ನವೆಂಬರ್ 25: ನಕಲಿ ಸಾಮಾಜಿಕ ಜಾಲತಾಣದ ಅಕೌಂಟ್ ಕ್ರಿಯೆಟ್ ಮಾಡಿ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿ ಹಣ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಂಗಳೂರು ನಿವಾಸಿಗಳಾದ ಗೋಕುಲ್‌ರಾಜು(20) ಹಾಗೂ ಪವನ್ ಎಲ್(20) ಎಂದು ಗುರುತಿಸಲಾಗಿದೆ.


    ಬಂಧಿತರು ಸಾಕ್ಷೀರಾಜ್ ಎನ್ನುವ ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಕೆಪಿಟಿ ನಿವಾಸಿ ರಾಜೇಶ್ ಎಂಬುವರಿಗೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಹೆಸರಿನಲ್ಲಿ ಕರೆ ಮಾಡಿ, ಅಶ್ಲೀಲ ಚಿತ್ರಗಳನ್ನು ಕಳುಹಿಸಿದ್ದರು. ನಂತರ ರಾಜೇಶ್ ಅವರಿಂದ ಬೆತ್ತಲೆ ಚಿತ್ರಗಳನ್ನು ಕೇಳಿ ಪಡೆದು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡಲಿಲ್ಲ ಎಂದಾದರೆ ಈ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿ ಹಣ ಪಡೆದಿದ್ದರು. ಒಂದಷ್ಟು ಹಣ ನೀಡಿದ ಬಳಿಕವೂ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟು ಹಣ ನೀಡದಿದ್ದಾಗ ಹಿರಿಯ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ವಂಚನೆ ಮಾಡಿದ್ದಾರೆ. ಅವರ ಕಿರುಕುಳ ತಾಳಲಾರದೆ ರಾಜೇಶ್ ಪೊಲೀಸರಿಗೆ ದೂರು ನೀಡಿದ್ದರು.
    ಮಂಗಳೂರು ಸೈಬರ್ ಕ್ರೈಂ ಪೊಲೀಸ್ ರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply