LATEST NEWS
ವಾಹನಗಳ ನಕಲಿ ದಾಖಲೆ ಸೃಷ್ಠಿಸಿ ವಂಚನೆ – ನಾಲ್ವರು ಆರೋಪಿಗಳು ಆರೆಸ್ಟ್
ವಾಹನಗಳ ನಕಲಿ ದಾಖಲೆ ಸೃಷ್ಠಿಸಿ ವಂಚನೆ – ನಾಲ್ವರು ಆರೋಪಿಗಳು ಆರೆಸ್ಟ್
ಮಂಗಳೂರು ಅಗಸ್ಟ್ 26: ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ವಂಚನೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀನಿವಾಸ ಆರ್. ಗೌಡ ನೇತೃತ್ವದ ತಂಡ ಈ ಜಾಲವನ್ನು ಪತ್ತೆಹಚ್ಚಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಪಾಂಡೇಶ್ವರದ ಮಂಗಳಾದೇವಿ ದೇವಸ್ಥಾನದ ಬಳಿಯ ನಿವಾಸಿ ಗೋವರ್ಧನ್ , ಬಜ್ಪೆ ಭಟ್ರಕೆರೆ ನಿವಾಸಿ ಮುಹಮ್ಮದ್ ಅನ್ವರ್ ಅಲಿಯಾಸ್ ಭಸ್ಮ ಅನ್ವರ್, ಬಂಟ್ವಾಳ ತಾಲ್ಲೂಕಿನ ತುಂಬೆ ನಿವಾಸಿ ನೌಷಾದ್ ಅಲಿಯಾಸ್ ನೌಷಾದ್ ಹುಸೈನ್ ಮತ್ತು ಮಂಗಳೂರಿನ ಕದ್ರಿ ಶಿವಭಾಗ್ ನಿವಾಸಿ ಉಮರ್ ಫಾರೂಕ್ ಅಲಿಯಾಸ್ ಆರ್‌ಟಿಒ ಉಮರ್ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ವಾಹನ ಮಾಲೀಕರ ಗಮನಕ್ಕೆ ಬಾರದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಒಂದೇ ವಾಹನದ ಹೆಸರಿನಲ್ಲಿ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಹಲವು ಬ್ಯಾಂಕ್‌ಗಳಲ್ಲಿ ಸಾಲ ಪಡೆಯುತ್ತಿದ್ದರು.ಮತ್ತು ಈ ಸಾಲದ ಮೊತ್ತವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು. ಅದನ್ನು ನಾಲ್ವರೂ ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ರೀತಿ 45 ಲಕ್ಷವನ್ನು ವಿವಿಧ ಬ್ಯಾಂಕ್‌ಗಳಿಗೆ ವಂಚಿಸಿರುವುದು ಪ್ರಾರ್ಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.