Connect with us

    LATEST NEWS

    ಆಸ್ಪತ್ರೆಗೆ ಅಡ್ಮಿಟ್ ಆಗಿದ್ದೇನೆ ಹಣ ಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸಪ್ ಮೆಸೆಜ್

    ಮಂಗಳೂರು ಅಕ್ಟೋಬರ್ 27: ಮಂಗಳೂರಿನ ಪೊಲೀಸ್ ಕಮಿಷನರ್ ಅವರ ವಾಟ್ಸ್ ಪ್ ಪ್ರೊಪೈಲ್ ಪೋಟೋ ಬಳಿಸಿಕೊಂಡು ಆಯುಕ್ತರ ಪರಿಚಯಸ್ಥರಿಗೆ ಮೇಸೆಜ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.


    ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ವಾಟ್ಸ್ ಆ್ಯಪ್ ಪ್ರೊಫೈಲ್ ಪೊಟೋ ಬಳಸಿರುವ ಕಿಡಿಗೇಡಿಗಳು ನಾನು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್. ನಾನು ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ಹಣ ಬೇಕಾಗಿದೆ. ನನ್ನ UPI ಕಾರ್ಯನಿರ್ವಹಿಸುತ್ತಿಲ್ಲ. ಅರ್ಜೆಂಟಾಗಿ ಹಣ ಟ್ರಾನ್ಸ್ ಫರ್ ಮಾಡಿ. ಒಂದು ತಾಸಿನೊಳಗೆ ವಾಪಸ್ ಮಾಡುತ್ತೇನೆ” ಎಂದು ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾನೆ. ಮೆಸೇಜ್ ಬೆನ್ನಲ್ಲೇ Whatsapp ಮೂಲಕ ಮಿಸ್ ಕಾಲ್ ಕೂಡ ಮಾಡಿದ್ದಾನೆ. ಪೊಲೀಸ್ ಅಧಿಕಾರಿಗಳು ಸೇರಿದಂತೆ ಆಯುಕ್ತರ ಹಲವು ಮಂದಿ ಪರಿಚಿತರಿಗೆ ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.

    ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದು, ಇದೊಂದು ನಕಲಿ ಮೆಸೇಜ್ ಕರೆಯಾಗಿದೆ. ಯಾರು ಕೂಡ ಸ್ಪಂದಿಸಬಾರದು ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply