Connect with us

KARNATAKA

ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ – ನಿಧನ ಸುದ್ದಿ ಸುಳ್ಳು ಆಸ್ಪತ್ರೆಯಿಂದ ಸ್ಪಷ್ಟನೆ

ಬೆಂಗಳೂರು ಸೆಪ್ಟೆಂಬರ್ 17:  ಕೊರೊನಾ ವೈರಸ್‌ ಸೋಂಕಿತರಾಗಿರುವ ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಣಿಪಾಲ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಿಧನ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇಂದು ಮಧ್ಯಾಹ್ನದ ನಂತರ ಬಿಜೆಪಿ ನೂತನ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ನಿಧನರಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕರ್ನಾಟಕ ಬಿಜೆಪಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವರು ಅವರಿಗೆ ಸಂತಾಪ ಸೂಚಿಸಿ ಟ್ಟೀಟ್‌ ಕೂಡ ಮಾಡಿದ್ದರು.

ಆದರೆ ಇದೀಗ ಸ್ಪಷ್ಟನೆ ನೀಡಿರುವ ಮಣಿಪಾಲ ಆಸ್ಪತ್ರೆ ನಿರ್ದೇಶಕ ಡಾ. ಮನೀಶ್‌ ರೈ, “ರಾಜ್ಯಸಭೆ ಸದಸ್ಯರು ತೀವ್ರ ಕೋವಿಡ್‌-19 ನ್ಯುಮೋನಿಯಾದಿಂದ ಬಳಲುತ್ತಿದ್ದು ಓಲ್ಡ್‌ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬಹುಅಂಗಾಗ ವೈಫಲ್ಯದಿಂದ ಅವರು ತೀವ್ರವಾಗಿ ಅಸ್ವಸ್ಥರಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ ಆಶ್ರಯದಲ್ಲಿದ್ದಾರೆ,” ಎಂದು ತಿಳಿಸಿದ್ದಾರೆ.

Facebook Comments

comments