KARNATAKA
ಅನ್ಯಜಾತಿ ಯುವಕನ ಜೊತೆ ಮಗಳ ಮದುವೆ..ಮರ್ಯಾದೆಗೆ ಅಂಜಿ ಮೂವರು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಅನ್ಯಜಾತಿ ಯುವಕನನ್ನು ಮಗಳು ಮದುವೆಯಾದ ಹಿನ್ನಲೆ ಮನನೊಂದು ತಂದೆ ತಾಯಿ ಹಾಗೂ ಆಕೆಯ ತಮ್ಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಎಂದು ಗುರುತಿಸಲಾಗಿದೆ.
26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ ಮನೆಯಲ್ಲಿಯೇ ಸಾಮೂಹಿಕವಾಗಿ ವಿಷ ಸೇವಿಸಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
