ಕೊಚ್ಚಿ : ಖ್ಯಾತ ಮಲಯಾಳಂ ನಟ ಮೋಹನ್ ಲಾಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಇತ್ತ ನಟನ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ.

ಮೋಹನ್ ಲಾಲ್ ಅವರು ಕೊಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುಜರಾತ್ನಲ್ಲಿ ಎಲ್2 ಎಂಬುರಾನ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದ ನಟ ಕೊಚ್ಚಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಮೃತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ನಟನನ್ನು ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳು ನಟನ ಅನಾರೋಗ್ಯದ ವಿವರಗಳನ್ನು ಬಿಡುಗಡೆ ಮಾಡಿದ್ದಾರೆ. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಐದು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಮೋಹನ್ಲಾಲ್ ಅವರಿಗೆ ಸಲಹೆ ನೀಡಿದ್ದಾರೆ.