Connect with us

    FILM

    ಬಾಲಿವುಡ್ ನ ಖ್ಯಾತ ನಟ ಅರುಣ್ ಬಾಲಿ ನಿಧನ

    ಮುಂಬೈ, ಅಕ್ಟೋಬರ್ 07: ಬಾಲಿವುಡ್ ಖ್ಯಾತ ನಟ ಅರುಣ್ ಬಾಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬಾಲಿ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ಇವರ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದು, ಕಿರು ಹಾಗೂ ಹಿರಿ ತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ.

    79ನೇ ವಯಸ್ಸಿನ ಅರುಣ್ ಬಾಲಿ ಸಿನಿಮಾ ರಂಗದಲ್ಲಿ ನಾನಾ ರೀತಿಯ ಪಾತ್ರಗಳನ್ನು ಮಾಡಿದವರು. ಅಪಾರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಆಮಿರ್ ಖಾನ್  ನಟನೆಯ ಲಾಲ್ ಸಿಂಗ್ ಚಡ್ಡಾ ಅವರ ನಟನೆಯ ಕೊನೆಯ ಸಿನಿಮಾ. ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಇವರು ವಿಶೇಷ ಪಾತ್ರವನ್ನು ನಿರ್ವಹಿಸಿದ್ದರು.

    ಬಾಲಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್ ಕಂಬನಿ ಮಿಡಿದಿದೆ. ಆಮಿರ್ ಖಾನ್ ಸೇರಿದಂತೆ ಬಾಲಿವುಡ್ ನ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಬಾಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply