LATEST NEWS
ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇನ್ನಿಲ್ಲ
ದೆಹಲಿ ಡಿಸೆಂಬರ್ 15: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾಗಿದ್ದಾರೆ.
73 ವರ್ಷ ಹುಸೇನ್ ಅವರಿಗೆ ರಕ್ತದೊತ್ತಡದ ಸಮಸ್ಯೆ ಇತ್ತು. ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕೀರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಪ್ರಸಿದ್ಧ ಸಂಗೀತಗಾರರಲ್ಲಿ ಒಬ್ಬರಾದ ಹುಸೇನ್ ಅವರು 1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಗೌರವಕ್ಕೆ ಭಾಜನರಾಗಿದ್ದಾರೆ.