DAKSHINA KANNADA
ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಕೋವಿಡ್ ಗೆ ಬಲಿ

ಮಂಗಳೂರು, ಮೇ 23 : ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಅಂತರಾಷ್ಟ್ರಮಟ್ಟದ ಸ್ಯಾಕ್ಸೋಫೋನ್ ಕಲಾವಿದೆ ಸಿಂಧೂ ಭೈರವಿ ಅವರ ತಂದೆ ಮಚೇಂದ್ರನಾಥ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಕೆಲದಿನಗಳ ದಿನ ಹಿಂದೆಯಷ್ಟೇ ಮಚ್ಚೇಂದ್ರನಾಥ್ ಪತ್ನಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು.

ಮಚೇಂದ್ರನಾಥ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಸಂಘಟನೆಗಳು ಅವರನ್ನು ಸನ್ಮಾನಿಸಿದ್ದವು. ದೇಶ ವಿದೇಶಗಳಲ್ಲಿ ಹಲವಾರು ಸಂಗೀತ ಕಚೇರಿಗಳನ್ನು ನಡೆಸಿದ್ದರು.