Connect with us

KARNATAKA

ರೈತ ಹೋರಾಟಗಾರ ಮಾರುತಿ ಮಾನ್ಪಡೆ ಇನ್ನಿಲ್ಲ

ಕಲಬುರ್ಗಿ,ಅಕ್ಟೋಬರ್ 19: ಕರ್ನಾಟಕದ ಕಮ್ಯೂನಿಸ್ಟ್​ ಸಿದ್ಧಾಂತಗಳ ನಾಯಕ ದಿಟ್ಟ ರೈತ ಹೋರಾಟಗಾರರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರೂ ಆಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು ಕೊರೋನಾ ಕಾರಣದಿಂದಾಗಿ (65) ಇಂದು ನಿಧನರಾಗಿದ್ದಾರೆ. ಇತ್ತೀಚಿನ ಕೇಂದ್ರದ ಕೃಷಿ ಮಸೂದೆಗಳ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಅವರು, ಅಕ್ಟೋಬರ್ 3 ರಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದರು.

ಕೋವಿಡ್‌ ವಿರುದ್ಧದ 15 ದಿನಗಳ ಸತತ ಹೋರಾಟದ ನಡೆಸಿದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.ಕೋವಿಡ್ ದೃಢಪಟ್ಟ ನಂತರ ಕಲಬರುಗಿಯ ಜೇಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ನಂತರ ಸೊಲ್ಲಾಪುರದ ಅಶ್ವಿನಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು ಎನ್ನಲಾಗಿದೆ.ಸಿಪಿಐ(ಎಂ) ಪಕ್ಷದ ಸದಸ್ಯರಾಗಿದ್ದುಕೊಂಡು ನೂರಾರು ರೈತ ಹೋರಾಟಗಳನ್ನು ಸಂಘಟಿಸಿದ ಅನುಭವವಿದ್ದ ಮಾನ್ಪಡೆಯವರು ಸೆಪ್ಟಂಬರ್ ತಿಂಗಳಿನಲ್ಲಿ ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ಸಂಘಟಿಸಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.