ಶಬರಿಮಲೆ ಅಯ್ಯಪ್ಪ ದರ್ಶನ ಮಾಡಿದ ಮಾಜಿ ಐಪಿಎಸ್ ಅಧಿಕಾರಿ ಸಿಂಗಂ ಖ್ಯಾತಿಯ ಅಣ್ಣಾಮಲೈ

ಕೇರಳ ಜೂನ್ 17: ಕರ್ನಾಟಕದ ಸಿಂಗಂ ಖ್ಯಾತಿಯ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜಿನಾಮೆ ಕೊಟ್ಟು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ.

ಸಂಕ್ರಾಂತಿ ದಿನ ಮಣಿಕಂಠನ ದರ್ಶನ ಮಾಡಲು ಅಣ್ಣಾಮಲೈ ಶಬರಿಮಲೆ ಗೆ ಬಂದಿದ್ದರು. ಖಾಕಿ ಯೂನಿಫಾರ್ಮ್ ಕಳಚಿ ಕಪ್ಪು ಲುಂಗಿ , ಹೆಗಲಿಗೊಂದು ಕಪ್ಪು ಶಾಲು ಹಾಕಿ 18 ಮೆಟ್ಟಿಲೇರಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ.

ಬೆಟ್ಟ ಹತ್ತುತ್ತಾ, ಇಳಿಯುತ್ತಾ ಮಾಲೆ ಹಾಕಿದ ಅಯ್ಯಪ್ಪ ಭಕ್ತರು ಅಣ್ಣಾಮಲೈ ಕಂಡು ಸೆಲ್ಫೀಗೆ ಮುಗಿಬಿದ್ದಿದ್ದಾರೆ. ಎಲ್ಲರೂ ಸಿಂಗಂ ಜೊತೆ ಕೈ ಕುಲುಕಿ ಮಾತನಾಡಿದ್ದಾರೆ. ಶಬರಿಮಲೆಗೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಭಕ್ತರು ಭೇಟಿಕೊಟ್ಟು ದರ್ಶನ ಪಡೆಯುತ್ತಾರೆ. ಮಲೆಗೆ ಬಂದ ಹೆಚ್ಚಿನವರಿಗೆ ಅಣ್ಣಾಮಲೈ ಬಗ್ಗೆ ಗೊತ್ತಿತ್ತು.

ಕೇರಳದ ಸ್ಥಳೀಯ ಎಸ್ ಪಿ ಅಣ್ಣಾಮಲೈ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಬಹಳ ಸಮಯದಿಂದ ಮಲೆಗೆ ಬರುವ ಸಂಕಲ್ಪ ಮಾಡಿದ್ದೆ. ಕೆಲಸದ ಒತ್ತಡದಲ್ಲಿ ಆಗಿರಲಿಲ್ಲ. ಮುಂದೇನು ಅಂತ ಆಮೇಲೆ ಹೇಳ್ತೇನೆ. ಸದ್ಯ ದೇವರ ದರ್ಶನ ಮಾಡಿದ್ದೇನೆ ಎಂದು ಹೇಳಿದರು.

VIDEO

13K Shares

Facebook Comments

comments