ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಇನ್ನಿಲ್ಲ.

ಮಂಗಳೂರು, ಜುಲೈ27: ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ನಿಧನರಾಗಿದ್ದು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ಜ್ವರ ಹಾಗೂ ತೀವೃ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿನ ವಿಕ್ರಮ ಆಸ್ಪತ್ರೆಗೆ ದಾಖಲಾಗಿದ್ದ ಧರಂಸಿಂಗ್ ಅಲ್ಲಿಂದ ಗುಣಮುಖರಾಗಿ ಮನೆ ಸೇರಿದ್ದರು. ಆದರೆ ಮನೆಯಲ್ಲಿ ಮತ್ತೆ ಅವರ ದೇಹ ಸ್ಥಿತಿ ಬಿಗಡಾಯಿಸಿದ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ನಿಧನರಾಗಿದ್ದು, ಅವರಿಗೆ 80 ವರ್ಷ ಪ್ರಾಯವಾಗಿತ್ತು.

   ಕರ್ನಾಟಕ ರಾಜ್ಯದ 17 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ್ದ ಅವರು 2004 ರಿಂದ 2006 ರ ವರೆಗೆ ಅಧಿಕಾರದಲ್ಲಿದ್ದರು. ಜೇವರ್ಗಿಯಿಂದ 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಧರ್ಮಸಿಂಗ್ , ಬೀದರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಧರ್ಮಸಿಂಗ್ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರು ಕಂಬನಿ ಮಿಡಿದಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲೆಂದು ಪ್ರಾರ್ಥಿಸಿದ್ದಾರೆ. ಧರಂ ಸಿಂಗ್ ಪಾರ್ಥಿವ ಶರೀರದ ವಿಡಿಯೋ ಗಾಗಿ ಲಿಂಕನ್ನು ಒತ್ತಿರಿ..

0 Shares

Facebook Comments

comments