Connect with us

LATEST NEWS

ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣ – ಮಂಜೇಶ್ವರ ಶಾಸಕ ಕಮರುದ್ದೀನ್ ಆರೆಸ್ಟ್

ಕಾಸರಗೋಡು ನವೆಂಬರ್ 7: ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್‌ರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ.


ಫ್ಯಾಶನ್ ಗೋಲ್ಡ್ ಇಂಟರ್ ನ್ಯಾಷನಲ್ ಕಂಪೆನಿ ಹೆಸರಿನಲ್ಲಿ ಸುಮಾರು 130 ಕೋಟಿ ರೂ. ಗಳಷ್ಟು ವಂಚನೆ ನಡೆದಿದ್ದು, ಸುಮಾರು 700 ಮಂದಿಯಿಂದ ಠೇವಣಿ ಪಡೆಯಲಾಗಿದೆ. ಈ ಪೈಕಿ 109 ಪ್ರಕರಣಗಳು ಈಗಾಗಲೇ ದಾಖಲಾಗಿದ್ದು, ಗ್ರಾಹಕರಿದಂ ಠೇವಣಿ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುವೆಲ್ಲರಿ ಅಧ್ಯಕ್ಷರಾಗಿರುವ ಕಮರುದ್ದೀನ್ ಆರೋಪಿಯಾಗಿದ್ದು, ಸುಮಾರು 700 ರಷ್ಟು ಗ್ರಾಹಕರಿಂದ 130 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ಈ ಹಿನ್ನಲೆ ಶಾಸಕರನ್ನು ವಿಶೇಷ ತನಿಖಾ ತಂಡ ಮುಖ್ಯಸ್ಥ ಪಿ. ವಿವೇಕ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತನಿಖಾ ತಂಡಕ್ಕೆ ಮಹತ್ವದ ಮಾಹಿತಿಗಳು ಲಭಿಸಿದ್ದು, ಈ ಹಿನ್ನಲೆಯಲ್ಲಿ ಶಾಸಕ ಕಮರುದ್ದೀನ್ ವಶಕ್ಕೆ ಪಡೆದಿದ್ದಾರೆ.