Connect with us

    LATEST NEWS

    ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ವಿರುದ್ದ ಆಕ್ರೋಶ

    ಉಡುಪಿ ಡಿಸೆಂಬರ್ 28: ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ನಿಯಮ‌ ಬದಲಾವಣೆಯ ವಿರುದ್ದ ಜನಾಕ್ರೋಶ ಹೆಚ್ಚಾಗಿದ್ದು, ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ ಆದೇಶ ಹಿನ್ನಲೆ ಉಡುಪಿ ಸಾಸ್ತಾನದ ನವಯುಗ ಟೋಲ್ ಗೇಟ್ ನಲ್ಲಿ ಸ್ಥಳೀಯರಿಗೆ ಯಾವುದೇ ಫ್ರೀ ಪಾಸ್ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನಲೆ ಟೋಲ್ ಗೇಟ್ ವಿರುದ್ದ ಈಗ ಸ್ಥಳೀಯರು ತಿರುಗಿ ಬಿದ್ದಿದ್ದಾರೆ.


    ಜನವರಿ 1 ರಿಂದ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿದ್ದು, ಇದರಿಂದಾಗಿ ಸ್ಥಳೀಯರಿಗೆ ಯಾವುದೇ ರೀತಿಯ ರಿಯಾಯಿತಿ ಸಿಗುವುದು ಅನುಮಾನವಾಗಿದೆ. ಈ ಹಿನ್ನಲೆ ಸ್ಥಳೀಯರಿಂದ ಹೊಸ ಆದೇಶದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ನವಯುಗ ಟೋಲ್ ಅಧಿಕಾರಿಗಳು ಮತ್ತು ಹೆದ್ದಾರಿ ಹೋರಾಟ ಸಮಿತಿ ನಡುವೆ ವಾಗ್ವಾದ ನಡೆದಿದ್ದು, ಸ್ಥಳೀಯ ವಾಹನಗಳಿಗೂ ಫಾಸ್ಟ್ ಟ್ಯಾಗ್ ಕಡ್ಡಾಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಜನವರಿ 1 ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ ವಿರೋಧಿಸಿ ಹೋರಾಟ ಸಾಧ್ಯತೆ ಇದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *