DAKSHINA KANNADA
ಕಾಸರಗೋಡು – ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ – ತಂದೆ ಅರೆಸ್ಟ್

ಕಾಸರಗೋಡು ಜುಲೈ 30: ತನ್ನ ಅಪ್ರಾಪ್ತ ಮಗಳನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಬಾಲಕಿಯ ತಂದೆಯನ್ನು ಹೊಸದುರ್ಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರೋಪಿ ಕರ್ನಾಟಕ ಮೂಲದವನಾಗಿದ್ದು, ಕಾಞಂಗಾಡ್‌ನ ಪುರಸಭೆಯ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದು, ಪತ್ನಿ ಮತ್ತು ಐದು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ತನ್ನ ಮಗಳು ಹೆರಿಗೆಯಾಗುವ ಒಂದು ತಿಂಗಳ ಮೊದಲು ಗಲ್ಫ್ ಗೆ ಪರಾರಿಯಾಗಿದ್ದ ಆತನನ್ನು ಪೊಲೀಸರು ವಾಪಾಸ್ ಕರೆಸಿ ಅರೆಸ್ಟ್ ಮಾಡಿದ್ದಾರೆ.

ಜುಲೈ 22 ರಂದು 10 ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ನಂತರ ಅತಿಯಾದ ರಕ್ತಸ್ರಾವದಿಂದಾಗಿ ಆಕೆಯನ್ನು ಕಾಞಂಗಾಡ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ..