LATEST NEWS
ನಕ್ಸಲ್ ನಂಟು ಆರೋಪದಿಂದ ಮುಕ್ತಗೊಂಡ ವಿಠಲ ಮಲೆಕುಡಿಯ

ಮಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿಗಳೆಂದು ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪು ನೀಡಿದೆ.
ಬೆಳ್ತಂಗಡಿ ಕುತ್ಲೂರು ನಿವಾಸಿಯಾಗಿದ್ದ ವಿಠಲ ಮಲೆಕುಡಿಯ ಅವರನ್ನು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳವು ಬಂಧಿಸಿ, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನದ ವೇಳೆ ವಿಠಲ ಮಲೆಕುಡಿಯ ಅವರ ಬಳಿ ಇದ್ದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪುಸ್ತಕಗಳನ್ನು, ಬೈನಾಕ್ಯುಲರ್ ವಶಪಡಿಸಿಕೊಳ್ಳಲಾಗಿತ್ತು. ನಂತರ ನ್ಯಾಯಾಲಯಕ್ಕೆ ಸಲ್ಲಿಸಲಾದ ದೋಷಾರೋಪ ಪಟ್ಟಿಯಲ್ಲಿ ವಿಠಲ ಮಲೆಕುಡಿಯ ಅವರನ್ನು 6ನೇ ಆರೋಪಿಯನ್ನಾಗಿ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು 7ನೇ ಆರೋಪಿಯನ್ನಾಗಿ ಮಾಡಲಾಗಿತ್ತು.

ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಈ ಆದೇಶ ಪ್ರಕಟಿಸಿದರು.