DAKSHINA KANNADA
ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಹೆಚ್ಚಿದೆ ಒಲವು: ಪುರುಷೋತ್ತಮ ಕೊಲ್ಪೆ

ಪುತ್ತೂರು, ಜುಲೈ 18: ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ನಡೆಯುವ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯದ ಜನತೆಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕೊಲ್ಪೆ ತಿಳಿಸಿದರು.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ನಡೆಸಿದ ಎರಡು ಪ್ರಮುಖ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿದ ಪರಿಣಾಮ ರಾಜ್ಯದ ಜನ ಸಂಕಷ್ಟದಲ್ಲಿ ಮುಳುಗಿದ್ದು, ರಾಜ್ಯದ ಜನತೆಯ ಆಮ್ ಆದ್ಮಿ ಪಕ್ಷವೊಂದೇ ಭರವಸೆಯ ರೂಪದಲ್ಲಿದೆ ಎಂದರು.

ಆಮ್ ಆದ್ಮಿ ಪಕ್ಷದ ದೆಹಲಿ ಮುಖ್ಯಮಂತ್ರಿಯಾಗಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಆಡಳಿತದ ಮೂಲಕ ದೇಶ-ವಿದೇಶಗಳಲ್ಲೂ ಖ್ಯಾತರಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಅತ್ಯುತ್ತಮ ಮಟ್ಟದ ಶಿಕ್ಷಣ, ಆರೋಗ್ಯ ಸೇವೆಯನ್ನು ನೀಡುವುದರ ಜೊತೆಗೆ ಭ್ರಷ್ಟಾಚಾರ ಮುಕ್ತ ದೇಶ ನಿರ್ಮಿಸುವುದು ಆಮ್ ಆದ್ಮಿ ಪಕ್ಷದ ಗುರಿ ಎಂದರು.