LATEST NEWS
ಫಾಜಿಲ್ ಹತ್ಯೆ ಪ್ರಕರಣ – 21 ಶಂಕಿತರು ಪೊಲೀಸ್ ವಶಕ್ಕೆ

ಮಂಗಳೂರು ಜುಲೈ 30: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸದ್ಯ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ. ಶೀಘ್ರದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸಲಾಗುವುದು. ಸೂಕ್ಷ್ಮ ಪರಿಸ್ಥಿತಿ ಹಿನ್ನೆಲೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಫಾಜಿಲ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರನ್ನ ನಿನ್ನೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ 21 ಶಂಕಿತರ ವಿಚಾರಣೆ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.