Connect with us

DAKSHINA KANNADA

ವಿದೇಶದಲ್ಲೂ ನಿಪಾಹ್ ವೈರಸ್ ಭೀತಿ: ಕೇರಳದಿಂದ ಬರುವವರಿಗೆ ಕ್ವಾರಂಟೈನ್ ಜಾರಿ..!

ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಮತ್ತೆ ನಿಪಾಹ್ ವೈರಸ್ ದೃಢಪಟ್ಟಿದ್ದು ಇಬ್ಬರನ್ನು ಈಗಾಗಲೇ ಬಲಿ ಪಡೆದಿದ್ದು ಇದರಿಂದ ವಿದೇಶಿ ಸರ್ಕಾರಗಳು, ವೀದೇಶಕ್ಕೆ ಹೋಗುವ ಪ್ರಯಾಣಿಕರು ಸಹ ಆತಂಕಕ್ಕೊಳಗಾಗಿದ್ದಾರೆ.

ದುಬೈ : ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಮತ್ತೆ ನಿಪಾಹ್ ವೈರಸ್ ದೃಢಪಟ್ಟಿದ್ದು ಇಬ್ಬರನ್ನು ಈಗಾಗಲೇ ಬಲಿ ಪಡೆದಿದ್ದು ಇದರಿಂದ ವಿದೇಶಿ ಸರ್ಕಾರಗಳು, ವೀದೇಶಕ್ಕೆ ಹೋಗುವ ಪ್ರಯಾಣಿಕರು ಸಹ ಆತಂಕಕ್ಕೊಳಗಾಗಿದ್ದಾರೆ.

ಕೇರಳದಿಂದ ಕೆಲಸಕ್ಕಾಗಿ ವಿದೇಶಕ್ಕೆ ತೆರಳಿದವರಲ್ಲಿ ಕೆಲವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ನರ್ಸಿಂಗ್ ಕೆಲಸಕ್ಕಾಗಿ ಜರ್ಮನಿಗೆ ತೆರಳಿದ್ದ ಎಂಟು ಕೇರಳಿಗರನ್ನು ಕ್ವಾರಂಟೈನ್ ಮಾಡಲಾಗಿದೆ.

ಒಡಾಪೆಕ್ ಮೂಲಕ ಜರ್ಮನಿಯಲ್ಲಿ ಕೆಲಸಕ್ಕಾಗಿ ಫ್ರಾಂಕ್ಫರ್ಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಂಟು ದಾದಿಯರನ್ನು ಕ್ವಾರಂಟೈನ್ ಮಾಡಲಾಗಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಸೂಚನೆಯಂತೆ ಈ ನಿರ್ಧಾರ ಕಯಗೊಳ್ಳಲಾಗಿದೆ.

ಕರ್ನಾಟಕದಲ್ಲೂ ಕೇರಳ ಪ್ರವಾಸಿಗರಿಗೆ ನಿಷೇಧ :
ಕೇರಳದಲ್ಲಿ ನಿಫಾ ವೈರಸ್ ಸೋಂಕಿತರು ಧೃಡಪಟ್ಟ ಬಳಿಕ ಪಕ್ಕದ ಕರ್ನಾಟಕ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಈ ನಡುವೆ ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲೆಯಲ್ಲಿ ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದೆ.

ಕೇರಳ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಅವಕಾಶ ನಿರಾಕರಿಸುವಂತೆ ಜಿಲ್ಲೆಯಲ್ಲಿರುವ ಎಲ್ಲಾ ರೆಸಾರ್ಟ್’ಗಳು, ಹೋಂಸ್ಟೇಗಳು ಮತ್ತು ಹೋಟೆಲ್ ಮಾಲೀಕರಿಗೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಕೇರಳದ ವೈರಸ್‌ ಪೀಡಿತ ಪ್ರದೇಶಗಳಿಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ಕರ್ನಾಟಕ ಸರ್ಕಾರ ಪ್ರತಿಯೊಬ್ಬರನ್ನು ಒತ್ತಾಯಿಸಿದೆ.

ವರದಿಯ ಪ್ರಕಾರ, ಕೇರಳದ ಸುತ್ತಮುತ್ತಲ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ಮೈಸೂರು ಮುಂತಾದ ಜಿಲ್ಲೆಗಳಲ್ಲಿ ಟ್ರ್ಯಾಕಿಂಗ್ ಅನ್ನು ವೇಗಗೊಳಿಸಲು ಸೂಚನೆ ನೀಡಿದೆ.

ಕೇರಳದಲ್ಲಿ ಹೊಸ ಪ್ರಕರಣ ಇಲ್ಲ..

ಕೇರಳದಲ್ಲಿ ನಿಪಾಹ್ ಭೀತಿ ಇದ್ದರೂ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *