Connect with us

    LATEST NEWS

    ಶಿಕ್ಷೆಯ ಭಯ: ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

    ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ.

    ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

    ಹರಿಹರದ ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಂದರ್ಭದಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಆರೋಪಿ ಮತ್ತು ಆತನ ಪತ್ನಿ ವಿಚ್ಛೇದನ ಪಡೆದಿದ್ದು, ಕೋರ್ಟ್ ಆದೇಶದಂತೆ ಪತ್ನಿಗೆ ಕೆಲವು ತಿಂಗಳಿಂದ ಜೀವನಾಂಶ ನೀಡಿರಲಿಲ್ಲ. ಪತ್ನಿಯ ಪರ ವಕೀಲರು ನ್ಯಾಯಾಧೀಶರ ಗಮನಕ್ಕೆ ಈ ವಿಚಾರ ತಂದಿದ್ದು, ಈ ಹಿನ್ನೆಲೆಯಲ್ಲಿ ಜೈಲಿಗೆ ಹಾಕುವ ಆದೇಶ ನೀಡಬಹುದೆಂಬ ಆತಂಕದಿಂದ ನ್ಯಾಯಾಲಯಕ್ಕೆ ಬರುವಾಗಲೇ ತಂದಿದ್ದ ಬಾಟಲಿಯಲ್ಲಿನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *