ಪುಲ್ವಾಮ ದಾಳಿ ಖಂಡಿಸಿ ಫೆಬ್ರವರಿ 19ರಂದು ಕರ್ನಾಟಕ ಬಂದ್‌

ಬೆಂಗಳೂರು ಫೆಬ್ರವರಿ 16: ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿ ಖಂಡಿಸಿ ಫೆಬ್ರವರಿ 19 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಫೆಬ್ರವರಿ 19 ರಂದು ಬೆಳಿಗ್ಗೆ 6ರಿಂದ ಸಂಜೆಯವರೆಗೂ ಬಂದ್ ನಡೆಯಲಿದೆ. ಆಸ್ಪತ್ರೆ, ಮಾಧ್ಯಮಗಳು, ಔಷಧಿ, ಹಾಲು ಮಾರಾಟಕ್ಕೆ ವಿನಾಯಿತಿ ಇರುತ್ತದೆ. ಬಸ್‌ಗಳು, ಸಿನಿಮಾ, ಖಾಸಗಿ ವಾಹನಗಳು ಬಂದ್ ಆಗಲಿವೆ. ಹೋಟೆಲ್‌, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಶಾಲಾ ಕಾಲೇಜ್ ಬಂದ್ ಆಗಲಿವೆ ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೈಗಾರಿಕಾ ಸಂಘಟನೆಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಸಂಘ, ಸರ್ಕಾರಿ ನೌಕರರ ಸಂಘ, ರಸ್ತೆ ಸಾರಿಗೆ ಸಂಸ್ಥೆ ಕಾರ್ಮಿಕರ ಸಂಘ ಸೇರಿದಂತೆ ಹಲವು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ ನೌಕರರಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ ಎಂದು ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಸ್.ನಾಗರಾಜು ಹೇಳಿದರು.