LATEST NEWS
ಫೆಬ್ರವರಿ 21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ

ಫೆಬ್ರವರಿ 21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ
ಲಖನೌ ಜನವರಿ 31 : ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡೆದ ಪರಮಧರ್ಮಸಂಸತ್ ನಲ್ಲಿ ಫೆಬ್ರವರಿ 21 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಘೋಷಿಸಲಾಗಿದೆ.
ಅಯೋಧ್ಯೆಯ ವಿವಾದಾತ್ಮಕ ಸ್ಥಳದ ಸುತ್ತಲು ಇರುವ ವಿವಾದಾತ್ಮಕವಲ್ಲದ ಸ್ಥಳವನ್ನು ಮಂದಿರ ನಿರ್ಮಾಣಕ್ಕೆ ಹಸ್ತಾಂತರಿಸಲು ಅವಕಾಶ ಕೊಡಬೇಕು ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅದರ ಬೆನ್ನಿಗೇ, ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರುವುದಕ್ಕಾಗಿ ಧರ್ಮ ಸಂಸತ್, ಕಾಮಗಾರಿ ದಿನಾಂಕವನ್ನು ಘೋಷಿಸಿದೆ.

ಬಂಧೂಕು ಗುಂಡುಗಳನ್ನು ಎದುರಿಸಬೇಕಾಗಿ ಬಂದರೂ ಚಿಂತೆಯಿಲ್ಲ, ಫೆಬ್ರವರಿ 21ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಾರಂಭದ ಸಮಾರಂಭವನ್ನು ನಡೆಸಲಾಗುವುದು ಎಂದು ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಹೇಳಿದ್ದಾರೆ.
ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಅಧ್ಯಕ್ಷತೆಯಲ್ಲಿ ಧರ್ಮ ಸಂಸತ್ ನಡೆಯಿತು. ರಾಮ ಹುಟ್ಟಿದ ಸ್ಥಳದ ಬದಲಿಗೆ ಬೇರೊಂದು ಸ್ಥಳದಲ್ಲಿ ಮಂದಿರ ನಿರ್ಮಿಸುವ ಷಡ್ಯಂತ್ರವನ್ನು ಬಿಜೆಪಿ ನಡೆಸುತ್ತಿದೆ ಎಂದು ಧರ್ಮ ಸಂಸತ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಫೆಬ್ರುವರಿ 21ರಂದು ಶಿಲಾನ್ಯಾಸ ನಡೆಯಲಿದೆ. ಅಂದಿನಿಂದಲೇ ಕಾಮಗಾರಿ ಆರಂಭವಾಗಲಿದೆ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜ್ ಘೋಷಿಸಿದರು.