BANTWAL
ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು
ಬಂಟ್ವಾಳ ಜುಲೈ 26: ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಎಂದು ಗುರುತಿಸಲಾಗಿದೆ. ಯುವಕ ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವಾರದ ಹಿಂದೆ ಜ್ವರ ಬಂದಿತ್ತು. ಈ ಹಿನ್ನಲೆ ಚಿಕಿತ್ಸೆ ಪಡೆಯುತ್ತಿದ್ದ ಆತನಿಗೆ ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
You must be logged in to post a comment Login