DAKSHINA KANNADA
ಬ್ರಿಟನ್‌ನಿಂದ 56 ಮಂದಿ ಮಂಗಳೂರಿಗೆ ಬಂದಿದ್ದಾರೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದ ಜೊತೆ

ಮಂಗಳೂರು, ಡಿಸೆಂಬರ್ 22: ಬ್ರಿಟನ್ ರಾಷ್ಟ್ರದಲ್ಲಿ ಈಗಾಗಲೇ ರೂಪಾಂತರಿಗೊಂಡ ಕೊರೋನಾ ಮಾದರಿಯ ಎರಡನೇ ಅಲೆ ಆರ್ಭಟಿಸುತ್ತಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೋನದ 2ನೇ ಅಲೆ ಭೀತಿ ಹುಟ್ಟಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ, ಬ್ರಿಟನ್ ಸಹಿತ ಹಲವು ದೇಶಗಳಿಂದ ಭಾರತೀಯರು ವಾಪಸಾಗುತ್ತಿದ್ದು, ಮಂಗಳೂರಿಗೂ 56 ಮಂದಿ ಬಂದಿದ್ದಾರೆ. ಇವರೆಲ್ಲರೂ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್‌ನೊಂದಿಗೆ ತಾಯ್ನಾಡು ಪ್ರವೇಶಿಸಿದ್ದಾರೆ. ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ . ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಎಲ್ಲರು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿದ್ದಾರೆ. ಅದಾಗ್ಯೂ ಅವರ ಮೊಬೈಲ್ ಟ್ರ್ಯಾಕ್ ಮಾಡಿ, ಅವರನ್ನು ಪತ್ತೆ ಮಾಡಲಾಗುತ್ತಿದೆ. ಎಲ್ಲರನ್ನೂ ಮತ್ತೊಮ್ಮೆ ಆರ್ ಟಿ ಪಿಸಿಅರ್ ಪರೀಕ್ಷೆಗೆ ಒಳಪಡಿಸಲಾಗುವುದು. 14 ದಿನಗಳ ಕ್ವಾರಂಟೈನ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
