Connect with us

LATEST NEWS

ಕಾಸರಗೋಡು ಖಾಸಗಿ ಬಸ್ ನಿಲ್ದಾಣದಲ್ಲಿ ವಿಧ್ಯಾರ್ಥಿಗಳ ಹೊಡೆದಾಟ

ಕಾಸರಗೋಡು ಖಾಸಗಿ ಬಸ್ ನಿಲ್ದಾಣದಲ್ಲಿ ವಿಧ್ಯಾರ್ಥಿಗಳ ಹೊಡೆದಾಟ

ಮಂಗಳೂರು ಅಕ್ಟೋಬರ್ 19: ಕಾಸರಗೋಡಿನ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ವಿಧ್ಯಾರ್ಥಿಗಳ ಮಾರಾಮಾರಿ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಚೆರ್ಕಳ ಎಂಬಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಎರಡೂ ಕಾಲೇಜಿನ ವಿದ್ಯಾರ್ಥಿಗಳು ಕೈ, ಕಾಲು, ಬ್ಯಾಗ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತುಗಳನ್ನು ಹಿಡಿದು ಪರಸ್ಪರ ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ವಿದ್ಯಾರ್ಥಿಗಳ ಜಟಾಪಟಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಮನಗಂಡ ಸಾರ್ವಜನಿಕರು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಗುಂಪನ್ನು ಚದುರಿದ್ದಾರೆ. ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ , ಈ ಘಟನೆ ಮಾತ್ರ ಪೋಲೀಸ್ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ.
ಈ ಕಾರಣ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ಕೂಡಾ ದಾಖಲಾಗಿಲ್ಲ.

ಸಾರ್ವಜನಿಕ ಶಾಂತಿಭಂಗ ಹಾಗೂ ಸಾರ್ವಜನಿಕರಿಗೆ ಭೀತಿ ಹುಟ್ಟಿಸುವ ರೀತಿಯಲ್ಲಿ ಈ ಹೊಡೆದಾಟ ನಡೆದಿದೆ. ಪೋಲೀಸ್ ಪ್ರಕರಣ ದಾಖಲಾಗದ ಹಿನ್ನಲೆಯಲ್ಲಿ ಯಾವ ಕಾರಣಕ್ಕಾಗಿ ಎರಡು ಕಾಲೇಜು‌ಗಳ ವಿದ್ಯಾರ್ಥಿಗಳ ಗುಂಪು ಹೊಡೆದಾಟ ನಡೆಸಿದೆ ಎನ್ನುವುದು ಈ ವರೆಗೆ ಸ್ಪಷ್ಟವಾಗಿಲ್ಲ.

VIDEO

https://youtu.be/8Is2xoxWHMQ