ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ವಿಚಾರದಲ್ಲಿ ಮತ್ತೆ ಘರ್ಷಣೆ

ಪುತ್ತೂರು ಜೂನ್ 2: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ಸಲ್ಲಿಸಲು ಆಗಮಿಸುವ ಭಕ್ತಾಧಿಗಳನ್ನು ಕ್ಷೇತ್ರದ ಪಕ್ಕದಲ್ಲೇ ಇರುವ ಸಂಪುಟ ನರಸಿಂಹ ಮಠದಲ್ಲಿ ಸರ್ಪ ಸಂಸ್ಕಾರ ನಡೆಸುವಂತೆ ಒತ್ತಾಯಿಸುತ್ತಿದ್ದ ಅರ್ಚಕನೋರ್ವನನ್ನು ಸಾರ್ವಜನಿಕರು ಹಿಡಿದು ದೇವಸ್ಥಾನದ ಆಡಳಿತ ಮಂಡಳಿಗೆ ಒಪ್ಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅರ್ಚಕ ಕುಮಾರ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದಾರೆ.

ಈ ನಡುವೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಕುಮಾರ್ ಆರೋಪಿಸಿದ್ದಾರೆ. ಕ್ಷೇತ್ರಕ್ಕೆ ಬರುವ ಭಕ್ತಾಧಿಗಳನ್ನು ದಾರಿ ತಪ್ಪಿಸಿ ಮಠಕ್ಕೆ ಕರೆದೊಯ್ಯುವ ವ್ಯವಸ್ಥಿತ ಷಡ್ಯಂತ್ರ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಕ್ಷೇತ್ರಕ್ಕೂ, ಸಂಪುಟ ನರಸಿಂಹ ಮಠಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ವಿಚಾರವನ್ನು ಮಾಧ್ಯಮ ಹಾಗೂ ಇತರ ಮೂಲಗಳ ಮೂಲಕ ದೇವಸ್ಥಾನದ ಆಡಳಿತ ಮಂಡಳಿ ಈಗಾಗಲೇ ಪ್ರಚಾರಪಡಿಸಿದೆ.

ಆ ಬಳಿಕವೂ ಮಠದಲ್ಲಿ ಕ್ಷೇತ್ರದ ಹೆಸರಿನಲ್ಲಿ ಸರ್ವ ಸಂಸ್ಕಾರ ನಡೆಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆ ಈ ವಿಚಾರದಲ್ಲಿ ಶೀಘ್ರ ಮಧ್ಯಪ್ರವೇಶಿಸದೇ ಹೋದಲ್ಲಿ ಕ್ಷೇತ್ರದಲ್ಲಿ ಮತ್ತೆ ಸಂಘರ್ಷ ನಡೆಯಲಿರುವ ಸಾಧ್ಯತೆಯೂ ಹೆಚ್ಚಾಗಿದೆ.

VIDEO

Facebook Comments

comments