Connect with us

  DAKSHINA KANNADA

  ಶಾಲಾ ಆವರಣದಲ್ಲಿ ಅನುಚಿತ ವರ್ತನೆ ತೋರಿದ ಶಾಸಕ ವೇದವ್ಯಾಸ್, ಡಾ,ಭರತ್ ಶೆಟ್ಟಿ ಕ್ರಿಮಿನಲ್ ಕೇಸ್ ದಾಖಲು ಮಾಡಿ : ಐವನ್ ಡಿಸೋಜ

  ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ಧರ್ಮ, ದೇವರಿಗೆ ಅವಮಾನ ಮಾಡಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆಯ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮುದ್ವೇಷದ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಶಾಸಕರ ಈ ವರ್ತನೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.

  ಮಂಗಳೂರಿನಲ್ಲಿ ಕಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಚಾರಣೆಮಾಡಲು ಅವಕಾಶ ಕಲ್ಪಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದರ ಬದಲು ಈ ಇಬ್ಬರು ಶಾಸಕರು ಅನುಚಿತವಾಗಿ ವರ್ತಿಸಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಶಾಸಕ ಹುದ್ದೆಯಿಂದ ವಜಾಗೊಳಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎದರು. ಶಾಲೆಯಲ್ಲಿ ಶಿಕ್ಷಕಿಯಿಂದ ಏನಾದರೂ ತಪ್ಪಾಗಿದ್ದರೆ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಿ ಬಳಿಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಅವಕಾಶ ನೀಡದೆ ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆಯ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮುದ್ವೇಷದ ಹೇಳಿಕೆ ನೀಡಿರುವುದು ಖಂಡನೀಯ. ಶಾಸಕರ ಈ ವರ್ತನೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply