ಬಹು ನಿರೀಕ್ಷಿತ ಕೆಜಿಎಫ್ ಸಿನಿಮಾ ಬಿಡುಗಡೆ ಹಿನ್ನಲೆ ರಾಕಿಂಗ್ ಸ್ಟಾರ್ ಯಶ್ ಕೊಲ್ಲೂರು ಭೇಟಿ

ಉಡುಪಿ ಡಿಸೆಂಬರ್ 16: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ ಸಿನಿಮಾ ಬಿಡುಗಡೆಗೆ ಕೇವಲ ಒಂದು ವಾರ ಮಾತ್ರ ಬಾಕಿಯಿರುವ ಹಿನ್ನಲೆಯಲ್ಲಿ ನಟ ಯಶ್ ಇಂದು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶಿಸಿರುವ ಸಿನಿಮಾದಲ್ಲಿ ಯಶ್ ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಆಗಿದ್ದು.ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಹಾಗೂ ಉತ್ತರ ಭಾರತದಲ್ಲಿ ಈ ಸಿನೆಮಾ ರಿಲೀಸ್ ಆಗಲಿದೆ.

ಈ ಹಿನ್ನಲೆಯಲ್ಲಿ ಚಿತ್ರದ ಯಶಸ್ಸಿಗಾಗಿ ನಟ ಯಶ್ ಇಂದು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದರು. ಕೊಲ್ಲೂರಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಯಶ್ ನಂತರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೊಲ್ಲೂರು ದೇವಸ್ಥಾನಕ್ಕೆ ಯಶ್ ಆಗಮಿಸಿದ ಹಿನ್ನಲೆಯಲ್ಲಿ ದೇವಳದ ವತಿಯಿಂದ ವಿಶೇಷ ಗೌರವ ನೀಡಲಾಯಿತು.

ಭಾರತದ ಸುಮಾರು 1,800 ರಿಂದ 2,000 ಚಿತ್ರಮಂದಿರಗಳಲ್ಲಿ ಕೆಜಿಎಫ್ ರಿಲೀಸ್ ಆಗಲಿದೆ, ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ತಮಿಳು, ತೆಲುಗು ಮಲಯಾಳಂ ಮತ್ತು ಹಿಂದಿ ಭಾಷೆಯ ಕೆಜಿಎಫ್ ಸಿನಿಮಾ ಪ್ರದರ್ಶನವಾಗಲಿದೆ, ಆಂದ್ರಪ್ರದೇಶ ಮತ್ತು ತೆಲಂಗಾಣದ ಸುಮಾರು 350 ಥಿಯೇಟರ್ ಗಳಲ್ಲಿ ಕೆಜಿಎಫ್ ಪ್ರದರ್ಶನ ಕಾಣಲಿದೆ.

ತಮಿಳು ವರ್ಷನ್ ಕೆಜಿಎಫ್ ಸಿನಿಮಾವನ್ನು ವಿಶಾಲ್ ಫ್ಯಾಕ್ಟರಿ ಫಿಲ್ಮ್ ತಮಿಳುನಾಡಿನ 150 ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದೆ, ಕೇರಳದ 75 ಥಿಯಟೇರ್ ಗಳಲ್ಲಿ ಮಲಯಾಳಮ ಹಾಗೂ ಹಿಂದಿ ವರ್ಷನ್ 1 ಸಾವಿರ ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ.

VIDEO

6 Shares

Facebook Comments

comments