Connect with us

LATEST NEWS

ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ 

ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ 

ಉಡುಪಿ, ಜನವರಿ 16 : ಉಡುಪಿ ಜಿಲ್ಲೆಯಲ್ಲಿ ಜನವರಿ 1, 2019 ನ್ನು ಅರ್ಹತಾ ದಿನವಾಗಿಟ್ಟುಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 9,90,773 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯ 118 ಬೈಂದೂರಿನಲ್ಲಿ 222542, ಕುಂದಾಪುರದಲ್ಲಿ 200101, ಉಡುಪಿಯಲ್ಲಿ 205566, ಕಾಪು ನಲ್ಲಿ 181178, ಕಾರ್ಕಳದಲ್ಲಿ 181386 ಸೇರದಂತೆ ಒಟ್ಟು 990773 ಮತದಾರರಿದ್ದು, ಒಟ್ಟು 477243 ಪುರುಷರು ಮತ್ತು 513523 ಮಹಿಳಾ ಮತದಾರರಿದ್ದಾರೆ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಹೊಸ ಸೇರ್ಪಡೆಗಾಗಿ 10273, ಹೆಸರುಗಳನ್ನು ತೆಗೆದುಹಾಕಲು 7099, ತಿದ್ದುಪಡಿಗಾಗಿ 3374 ಮತ್ತು ವಿಧಾನ ಸಭಾ ವ್ಯಾಪ್ತಿಯಲ್ಲಿ ಬದಲಾವಣೆಗಾಗಿ 755 ಅರ್ಜಿಗಳು ಸ್ವೀಕೃತವಾಗಿದ್ದು, 4793 ಯುವ ಮತದಾರರು ನೊಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಉಡುಪಿ ಪುರಭವನದಲ್ಲಿ ಮತ್ತು ಪ್ರತಿ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಹೊಸದಾಗಿ ನೊಂದಣಿ ಮಾಡಿರುವ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಕಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಪರಿಷ್ಕೃತ ಮತದಾರರ ಪಟ್ಟಿಯ ಪ್ರತಿಯನ್ನು ವಿತರಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *