FILM
ಕಾಂತಾರ ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು ನವೆಂಬರ್ 3: ಬಿಡುಗಡೆಯಾಗಿ ತಿಂಗಳು ಕಳೆದರೂ ಕಾಂತಾರ ಸಿನೆಮಾ ಮಾತ್ರ ತನ್ನ ಚಾರ್ಮನ್ನು ಕಳೆದುಕೊಂಡಿಲ್ಲ. ಇನ್ನೂ ಕೂಡ ಸೆಲೆಬ್ರೆಟಿಗಳು ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಇದೀಗ ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮಾಡಿರುವ ಟ್ವೀಟ್‌ಗೆ ರಿಷಬ್ ಶೆಟ್ಟಿ (Rishabh Shetty) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಹಣಕಾಸು ಸಚಿವರಿಗೆ ಧನ್ಯವಾದಗಳನ್ನೂ ಅವರು ತಿಳಿಸಿದ್ದಾರೆ.
