LATEST NEWS
ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡೆ ಚೈತ್ರಾ ಕುಂದಾಪುರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 4ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾ ವಾಹಿನಿಯಿಂದ ಆಯೋಜಿಸಲಾಗಿದ್ದ ಬೃಹತ್ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಅವರ ದಿಕ್ಸೂಚಿ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಭಾಷಣದ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಸಂಘಟಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಆದರೆ ಈವರೆಗೆ ಪ್ರಕರಣ ದಾಖಲಿಸಲಾಗಿರಲಿಲ್ಲ. ಇದೀಗ ಕಾನೂನು ತಜ್ಞರ ಅಭಿಪ್ರಾಯ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.