KARNATAKA
ಕಾಂಗ್ರೆಸ್ ನಾಯಕಿ ವಿರುದ್ಧ FIR- ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ
ಬೆಳಗಾವಿ, ಜುಲೈ 19: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.
ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ತಡರಾತ್ರಿಯೇ ದೂರು ನೀಡಲಾಗಿದ್ದು, ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ನೀಡಿದ ದೂರಿನ ಮೇರೆಗೆ ನವ್ಯಶ್ರೀ ವಿರುದ್ಧ IPC ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನವ್ಯಶ್ರೀ ನನಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ, ಸುಳ್ಳುಕೇಸ್ ನೀಡಿ ಮಾನಹಾನಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.