Connect with us

    FILM

    ಪತಿ ಮತ್ತು ಮಾವನ ವಿರುದ್ದ ಎಫ್ಐಆರ್ ದಾಖಲಿಸಿದ ನಟಿ

    ಮೈಸೂರು ಮೇ 24: ನಟಿ ಚೈತ್ರಾ ಹಳ್ಳಿಕೆರೆ ತನ್ನ ಮಾವ ಮತ್ತು ಪತಿ ವಿರುದ್ದ ಪೊಲೀಸ್ ಮೆಟ್ಟಿಲೇರಿದ್ದು, ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತನ್ನ ಅನುಮತಿಯಿಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್, ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಗೋಲ್ಡ್​ ಲೋನ್ ಪಡೆಯುವ ವೇಳೆ ತನ್ನ ಸಹಿಯನ್ನು ನಕಲು (ಫೋರ್ಜರಿ) ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ ಶಾಮೀಲಾಗಿದ್ದಾರೆ. ಪ್ರಕರಣ ಸಂಬಂಧ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಅವರು ಮೂರು ದಿನಗಳ ಹಿಂದೆಯೇ ದೂರು ನೀಡಿದ್ದಾರೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *